ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರುವುದು ಅವಕಾಶಕ್ಕಾಗಿ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ನಾವೆಲ್ಲ ಒಟ್ಟಾಗಿ ದುಡಿಯಬೇಕು. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಮಂತ್ರಿ ಆಗಲಿದ್ದಾರೆ ಕಾಂಗ್ರೆಸ್ ಏನೇ ಮಾಡಿದರೂ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಆಗಿದ್ದು ನಮ್ಮ ಹೆಮ್ಮೆ. ಮೋದಿ ದೇಶದ ಸಂಸ್ಕೃತಿ, ಪರಂಪರೆ ಉಳಿಸುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ನವರಿಗೆ ಜೈಶ್ರೀರಾಮ್ ಅಂದ್ರೆ ನಿದ್ದೆ ಬರಲ್ಲ. ಕೇಸರಿ ಬಣ್ಣ ನೋಡಿದರೂ ಕೂಡ ಅವರಿಗೆ ನಿದ್ದೆ ಬರುವುದಿಲ್ಲ ಎಂದು ಟೀಕಿಸಿದ್ದಾರೆ.