![](https://kannadadunia.com/wp-content/uploads/2024/02/farmer.jpg)
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಕೃಷಿ ಸಂಬಂಧಿತ ಸಾಲಗಳ ಬಡ್ಡಿ ಮನ್ನಾದ ಕುರಿತು ಹೊರಡಿಸಿದ್ದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ.