HomeKarnatakaಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಅರೆಸ್ಟ್

ಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನೂಲಿಗ್ಗೇರಿಯಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಘಟನೆ ವರದಿಯಾದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ನಗರ ಠಾಣೆ ಪೊಲೀಸರ ಕಾರ್ಯಾಚರಣೆಗೆ ಪ್ರಶಂಸೆ ವ್ಯಕ್ತವಾಗಿದೆ.

ಸೋಮವಾರ ರಾತ್ರಿ ನೂಲಿಗ್ಗೇರಿಯ ರಾಜಮ್ಮ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹೆಂಚು ತೆಗೆದು ಒಳ ನುಗ್ಗಿದ ಕಳ್ಳರು ಬೀರುವಿನ ಬೀಗ ಒಡೆದು ಚಿನ್ನದ ಸರ ಸೇರಿದಂತೆ 4.65 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.

ರಾಜಮ್ಮ ಮನೆಗೆ ಬಂದು ನೋಡಿದಾಗ ಕಳವು ನಡೆದಿರುವುದು ಗೊತ್ತಾಗಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಕಳವು ಮಾಡಿದ್ದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಸುಹಾನ್, ಅಶೋಕ, ಗಣೇಶ ಬಂಧಿತ ಆರೋಪಿಗಳಾಗಿದ್ದಾರೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಾಚರಣೆಯಲ್ಲಿ ನಗರ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಮಂಜುನಾಥ್, ವೆಂಕಟೇಶ್, ಪ್ರವೀಣ್ ಕುಮಾರ್, ಕಿರಣ್ ಕುಮಾರ್, ವಿಶ್ವನಾಥ್, ಶಾಂತಪ್ಪ ಭಾಗವಹಿಸಿದ್ದರು. ಪ್ರಕರಣ ಭೇದಿಸಿ ಆರೋಪಿಗಳನ್ನು ಬಂಧಿಸಿದ ಸಿಬ್ಬಂದಿಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಅಭಿನಂದಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular