ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು. ಜಿಲ್ಲಾಡಳಿತದ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸಬೇಕು ಹಾಗೂ ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಬೇಕು, ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಬೇಕು ಎಂದರು.

ಈ ವೇಳೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂ.ಗಳ ಅನುದಾನ ಒದಗಿಸಲು ಪರಿಷತ್ ಅಧ್ಯಕ್ಷರು ಮನವಿ ಸಲ್ಲಿಸಿದರು.  ಜಿಲ್ಲಾ ಉಸ್ತುವಾರಿ ಸಚಿವ ಚೆಲುವನಾರಾಯಣಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಪಿ.ಎಂ ನರೇಂದ್ರಸ್ವಾಮಿ,  ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read