ಹಾವೇರಿ : ಲೋಕಸಭೆ ಚುನಾವಣೆ ಬಳಿಕ ಮೂರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಸಮಾರಂಭವೊಂದರಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಗ್ಯಾರಂಟಿ ಸೌಲಭ್ಯ ಸಿಗದ ಜನರು ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಗೆ ತಿರುಗುಬಾಣವಾಗಲಿದ್ದು, ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿದ್ದ ನಾಲ್ಕು ಸಾವಿರ ರೂ. ನಿಲ್ಲಿಸಿದ್ದಾರೆ. ರೈತರ ವಿದ್ಯಾನಿಧಿ, ರೈತಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸಿದ್ದಾರೆ. ಲೋಕಸಭೆ ಚುನಾವಣೆ ನಡೆದು ಮೂರು ತಿಂಗಳಲ್ಲಿ ಈ ದರಿದ್ರ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಹೇಳಿದ್ದಾರೆ.