ನವದೆಹಲಿ : ಸೂರ್ಯೋದಯ ಸೋಲಾರ್ ಯೋಜನೆಗೆ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಲಾಗಿದ್ದು, 1 ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯುನಿಟ್ ಉಚಿತ್ ವಿದ್ಯುತ್ ನೀಡಲು ನಿರ್ಧರಿಸಲಾಗಿದೆ.
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ್ದು, ಸೂರ್ಯೋದಯ ಯೋಜನೆಯ ಫಲಾನುಭವಿಗಳಿಗೆ ಪ್ರತಿ ತಿಂಗಳು 300 ಯುನಿಟ್ ಉಚಿತ್ ವಿದ್ಯುತ್ ನೀಡಲಾಗುವುದು. ಜೊತೆಗೆ ಅವರು ಉತ್ಪಾದಿಸಿದ ಹೆಚ್ಚುವರಿ ಸೌರವಿದ್ಯುತ್ ಅನ್ನು ವಿದ್ಯುತ್ ತಯಾರಕ ಕಂಪನಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.
‘ಮೇಲ್ಛಾವಣಿ ಸೌರೀಕರಣ’ 1 ಕೋಟಿ ಮನೆಗಳಿಗೆ ತಿಂಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಇದು ಕುಟುಂಬಗಳಿಗೆ ವಾರ್ಷಿಕವಾಗಿ 15,000-18,000 ರೂ.ಗಳನ್ನು ಉಳಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.