ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.20 ರ ವರೆಗೆ ವಿಸ್ತರಿಸಲಾಗಿದೆ ಎಂದು ಬಳ್ಳಾರಿಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ.
ಇಂಜಿನಿಯರಿಂಗ್, ಮೆಡಿಕಲ್, ಬಿ.ಎಡ್, ಪ್ಯಾರಾ ಮೆಡಿಕಲ್ ಹಾಗೂ ಸ್ನಾತಕೋತ್ತರ ಕೋರ್ಸ್ಗಳಲ್ಲಿ ಪ್ರವೇಶ ಪಡೆದ ಅರ್ಹ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಎಸ್ಹೆಚ್ಪಿ ನಲ್ಲಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.