ಚಿತ್ರದುರ್ಗ : ಫೆ. 5ರಂದು ಚಿತ್ರದುರ್ಗದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ.
ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದ್ದು, ಆಸಕ್ತರು ಬಯೋಡಾಟಾ, ಪೋಟೋ, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ದೂರವಾಣಿ ಸಂಖ್ಯೆ 9945587060, 7022459064 ಸಂರ್ಪಕಿಸಬಹುದಾಗಿದೆ.
18 ರಿಂದ 28 ವರ್ಷದೊಳಗಿನ ಪುರುಷ, ಮಹಿಳೆ ಅಭ್ಯರ್ಥಿಗಳಿಗೆ ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.