ಬೆಂಗಳೂರು : ರಾಜ್ಯದಲ್ಲಿ ಯಾರೂ ಕೂಡ ಆರೋಗ್ಯ ಸೇವೆಯಿಂದ ವಂಚಿರಾಗಬಾರದು, ಬಡಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತಲುಪಿಸಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕಡೆ ಹಂತ ಹಂತವಾಗಿ ಆರೋಗ್ಯ ಮೇಳ ನಡೆಸಲು ಯೋಜನೆ ಸಿದ್ಧವಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಜನವರಿ 29ರಂದು ಕೊಳ್ಳೇಗಾಲದಲ್ಲಿ ಬೃಹತ್ ಆರೋಗ್ಯ ಮೇಳ ನಡೆದು ಅದ್ಭುತ ಯಶಸ್ಸು ಕಂಡಿದೆ. ನಿರೀಕ್ಷೆಗೂ ಮೀರಿ 12 ಸಾವಿರಕ್ಕೂ ಹೆಚ್ಚು ಮಂದಿ ಆರೋಗ್ಯ ಮೇಳದಲ್ಲಿ ಪಾಲ್ಗೊಂಡು ಆರೋಗ್ಯ ಸೇವೆ ಪಡೆದಿದ್ದಾರೆ. ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಿಕಿತ್ಸೆ ಪಡೆದುಕೊಂಡಿರುವುದು ಸಂತಸ ತಂದಿದೆ.
ನಿಮ್ಮ ಆರೋಗ್ಯ ನಮ್ಮ ಬದ್ಧತೆಯಾಗಿದ್ದು ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದಿದ್ದಾರೆ.