ಅಲಹಾಬಾದ್ : ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ನಡೆಯುತ್ತಿರುವ ಪೂಜೆಗೆ ಮಧ್ಯಂತರ ತಡೆ ಕೋರಿ ಜ್ಞಾನವಾಪಿ ಮಸೀದಿ ಸಮಿತಿಯು ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ತಿರಸ್ಕರಿಸಿದ್ದು, ಮಸೀದಿ ಸಮಿತಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಈ ಹಿನ್ನೆಲೆ ಈ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಇಂದು ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯೊಳಗೆ ಹಿಂದೂ ಭಕ್ತರಿಗೆ ಪೂಜೆ ಮುಂದುವರೆಸಲು ಅಲಹಾಬಾದ್ ಹೈಕೋರ್ಟ್ ಅವಕಾಶ ನೀಡಿದೆ. ಆದೇಶದ ವಿರುದ್ಧ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಗೆ ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಈ ಹಿನ್ನೆಲೆ ಮಸೀದಿ ಸಮಿತಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.