HomeEntertainmentಮತ್ತೆ ಫೋಟೊ ಹಂಚಿಕೊಂಡ ಪವಿತ್ರಾ ಗೌಡ : ನಮ್ಮ 'ಬಾಸ್' ಗೆ ನೀವೆ ಸೂಪರ್ ಜೋಡಿ...

ಮತ್ತೆ ಫೋಟೊ ಹಂಚಿಕೊಂಡ ಪವಿತ್ರಾ ಗೌಡ : ನಮ್ಮ ‘ಬಾಸ್’ ಗೆ ನೀವೆ ಸೂಪರ್ ಜೋಡಿ ಎಂದ ಫ್ಯಾನ್ಸ್..!

ಬೆಂಗಳೂರು : ವಿವಾದದ ಬಳಿಕ ಪವಿತ್ರಾ ಗೌಡ ಮತ್ತೆ ಫೋಟೋ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೆಲವು ದಿನಗಳ ಹಿಂದೆ ನಟ ದರ್ಶನ್ ಜೊತೆಗಿರುವ ಕೆಲವು ಫೋಟೊಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಇದಕ್ಕೆ ಡಿ ಬಾಸ್ ಪತ್ನಿ ವಿಜಯಲಕ್ಷ್ಮಿ ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಪವಿತ್ರಾ ಗೌಡ ಮತ್ತೆರಡು ಫೋಟೋ ಹಂಚಿಕೊಂಡಿದ್ದಾರೆ. ಪವಿತ್ರಾ ಗೌಡ ಕ್ಯಾಮರಾ ಹಿಡಿದು ಕ್ಯಾಮರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್  ಮಾಡಿದ್ದಾರೆ.

ಇದಕ್ಕೆ ಅಭಿಮಾನಿಗಳಿಂದ ತರಹೇವಾರಿ ಕಮೆಂಟ್ ಗಳು ಬರುತ್ತಿದೆ. ಯಾವತ್ತಿಗೂ ನಮ್ಮ ಬಾಸ್  ಗೆ  ನೀವೆ ಸೂಪರ್ ಜೋಡಿ” ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ರೆ, ಇನ್ನೊಬ್ಬರು “ದರ್ಶನ್ ತುಂಬ ಅದೃಷ್ಠವಂತ ಗುರು” ಎಂದು ಕಮೆಂಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವಾದದ ಹಿನ್ನೆಲೆ

ಪತಿ ದರ್ಶನ್ ಹಾಗೂ ಮಗ ವಿನೀತ್ ಜೊತೆಗಿನ ಫೋಟೋವೊಂದನ್ನು ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ‘ಕುಟುಂಬವೇ ಎಲ್ಲಾ’ ಎಂದು ಬರೆದುಕೊಂಡಿದ್ದರು. ಅದಾದ ಕೆಲವೇ ಹೊತ್ತಲ್ಲಿ ಪವಿತ್ರಾ ಗೌಡ ತಮ್ಮ ಹಾಗೂ ದರ್ಶನ್ ಅವರ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ‘ ನಮ್ಮ ಸಂಬಂಧಕ್ಕೆ 10 ವರ್ಷವಾಯಿತು. ಇನ್ನೂ ಹಲವು ವರ್ಷ ಜೊತೆಗೆ ಸಾಗಬೇಕು’ ಎಂದು ಕ್ಯಾಪ್ಶನ್ ನೀಡಿದ್ದರು.

ಪವಿತ್ರಾ ಗೌಡ ಅವರ ಪೋಸ್ಟ್ ಗೆ ಆಕ್ರೋಶ ವ್ಯಕ್ತಪಡಿಸಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುತ್ತಿರಲಿಲ್ಲ. ಈ ಕೆಲಸ ಆಕೆಯ ನೈತಿಕತೆ ಹಾಗೂ ಆದರ್ಶ ಎಂತಾದ್ದು ಎಂಬುದನ್ನು ತೋರಿಸುತ್ತದೆ. ವ್ಯಕ್ತಿಯೋರ್ವ ವಿವಾಹಿತನೆಂಬುದು ತಿಳಿದಿದ್ದರೂ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಹಾಗೂ ಲಾಭಕ್ಕಾಗಿ ಹತ್ತಿರವಾಗುತ್ತಾಳೆ ಎಂದು ಕಿಡಿಕಾರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular