ಗದಗ : ಗದಗದಲ್ಲಿ ನಟ ಯಶ್ ‘ಬರ್ತ್ ಡೇ’ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ದಾರುಣವಾಗಿ ಮೃತಪಟ್ಟಿದ್ದರು. ಅಲ್ಲದೇ ಈ ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.
ಘಟನೆಗೆ ಸಂಬಂಧಿಸಿದಂತೆ ಅಭಿಮಾನಿಗಳ ಕುಟುಂಬಕ್ಕೆ ನಟ ಯಶ್ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ನೀಡಿದ್ದರು. ಇದೀಗ ಗಾಯಾಳುಗಳ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡಿದ್ದಾರೆ. ಇತ್ತೀಚೆಗೆ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದ್ದ ನಟ ಯಶ್ ಸೂಕ್ತ ಪರಿಹಾರ ನೀಡುವುದಾಗಿ ಮಾತು ಕೊಟ್ಟಿದ್ದರು. ಅಂತೆಯೇ ಗಾಯಾಳುಗಳ ಕುಟುಂಬಕ್ಕೆ 1 ಲಕ್ಷ ಹಣ ವರ್ಗಾಯಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ನಂತರ ನಟ ಯಶ್ ಗ್ರಾಮಕ್ಕೆ ಬಂದು ಅಭಿಮಾನಿಗಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು.
ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದರು. ಅವಘಡದಲ್ಲಿ ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದರು. . ನೀಲಗಿರಿ ತೋಪಿನಲ್ಲಿ ಯಶ್ ಬರ್ತಡೇ ಬ್ಯಾನರ್ ಕಟ್ಟುವಾಗ ದುರಂತ ಸಂಭವಿಸಿದೆ. ಯಶ್ ಅವರ ಅಭಿಮಾನಿಗಳಾಗಿದ್ದ ಯುವಕರು ನೆಚ್ಚಿನ ನಟನ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಬ್ಯಾನರ್ ಕಟೌಟ್ ಕಟ್ಟಿ ಮೇಲೆತ್ತಿ ನಿಲ್ಲಿಸುವಾಗ ಕರೆಂಟ್ ವೈರ್ ತಗುಲಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರು.