![](https://kannadadunia.com/wp-content/uploads/2021/06/Vidhana_Soudha_750_1.gif)
ಬೆಂಗಳೂರು : ಬಹುನಿರೀಕ್ಷಿತ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ –ಎ ಹಾಗೂ ಗ್ರೂಪ್ –ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಸಿರು ನಿಶಾನೆ ತೋರಿದ್ದು, ಇಲಾಖಾವಾರು ಹುದ್ದೆಗಳ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.
2023-24ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಗೆಜೆಟೆಡ್ ಪ್ರೊಬೇಷನರುಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕ) ನಿಯಮಗಳು, 1997ರಡಿ ಈ ಕೆಳಕಂಡ ವೃಂದಗಳಲ್ಲಿನ ಗ್ರೂಪ್-ಎ ಮತ್ತು ಗ್ರೂಪ್ ಬಿ ಹುದ್ದೆಗಳ ರಿಕ್ತ ಸ್ನಾನಗಳನ್ನು ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮಗಳಂತೆ ವರ್ಗೀಕರಣ ಮಾಡಿ ಅನುಬಂಧ-1 ರಿಂದ 22ಎ ರವರೆಗೆ ಲಗತ್ತಿಸಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಬಿಡುಗಡೆ ಮಾಡಲಾಗಿದೆ.
![](https://kannadadunia.com/wp-content/uploads/2024/02/WhatsApp-Image-2024-02-03-at-5.33.21-AM-1.jpeg)
![](https://kannadadunia.com/wp-content/uploads/2024/02/WhatsApp-Image-2024-02-03-at-5.33.21-AM.jpeg)