HomeIndiaBIG NEWS : ಎಎಪಿ ಶಾಸಕರ ಖರೀದಿ ಆರೋಪ : ಅರವಿಂದ್ ಕೇಜ್ರಿವಾಲ್ ಮನೆಗೆ ಪೊಲೀಸರ...

BIG NEWS : ಎಎಪಿ ಶಾಸಕರ ಖರೀದಿ ಆರೋಪ : ಅರವಿಂದ್ ಕೇಜ್ರಿವಾಲ್ ಮನೆಗೆ ಪೊಲೀಸರ ದೌಡು

ನವದೆಹಲಿ: ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಏಳು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ ಕೆಲವು ದಿನಗಳ ನಂತರ, ದೆಹಲಿ ಪೊಲೀಸ್ ಅಪರಾಧ ವಿಭಾಗದ ಪೊಲೀಸರು ಈ ಪ್ರಕರಣದಲ್ಲಿ ಅವರಿಗೆ ನೋಟಿಸ್ ನೀಡಲು ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಪರಾಧ ವಿಭಾಗದ ತಂಡವು ಶುಕ್ರವಾರ ಕೇಜ್ರಿವಾಲ್ ಮತ್ತು ಕ್ಯಾಬಿನೆಟ್ ಸಚಿವ ಅತಿಶಿ ಅವರ ನಿವಾಸಗಳಿಗೆ ಭೇಟಿ ನೀಡಿ ನೋಟಿಸ್ ನೀಡಿದೆ. ಆದರೆ ನೋಟಿಸ್ ಗಳನ್ನು ಸ್ವೀಕರಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.ಇದೀಗ ಇಂದು ಮತ್ತೆ ಶನಿವಾರ ದೆಹಲಿ ಪೊಲೀಸರು ಕೇಜ್ರಿವಾಲ್ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

ತನ್ನ ಏಳು ಶಾಸಕರನ್ನು ಖರೀದಿಸಲು ಬಿಜೆಪಿ ತಲಾ 25 ಕೋಟಿ ರೂ.ಗಳ ಆಫರ್ ನೀಡಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು. ಈ ಬಗ್ಗೆ ಬಿಜೆಪಿ ಪೊಲೀಸರಿಗೆ ದೂರು ನೀಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular