ಬೆಂಗಳೂರು : ಬಿಜೆಪಿ ಭೀಷ್ಮ ಎಲ್.ಕೆ ಅಡ್ವಾಣಿಗೆ ಪ್ರಧಾನಿ ಮೋದಿ ಭಾರತ ರತ್ನ ಘೋಷಣೆ ಮಾಡಿದ್ದು, ಹಿರಿಯ ನಾಯಕರು ಅಡ್ವಾಣಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರ. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಭಾರತರತ್ನ’ ಗೌರವಕ್ಕೆ ಪಾತ್ರರಾಗಿರುವ ಹಿರಿಯ ರಾಜಕಾರಣಿ, ಮುತ್ಸದ್ಧಿ, ಬಿಜೆಪಿ ಭೀಷ್ಮ ಹಾಗೂ ಮಾಜಿ ಉಪ ಪ್ರಧಾನಿಗಳಾದ ಶ್ರೀ ಎಲ್.ಕೆ.ಆಡ್ವಾಣಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಅತ್ಯುನ್ನತ ಗೌರವಕ್ಕೆ ಅರ್ಹ ವ್ಯಕ್ತಿಯನ್ನು ಗುರುತಿಸಿ ಪುರಸ್ಕಾರ ಘೋಷಿಸಿರುವ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮೋದಿ ಅವರಿಗೆ ನನ್ನ ಅಭಿವಂದನೆಗಳು. ಭಾರತೀಯ ರಾಜಕಾರಣದಲ್ಲಿ ನಿಷ್ಠೆ, ಬದ್ಧತೆ, ಸ್ನೇಹಶೀಲತೆ ಹಾಗೂ ಕಠಿಣ ಪರಿಶ್ರಮಕ್ಕೆ ಅನ್ವರ್ಥವಾದ ಶ್ರೀ ಆಡ್ವಾಣಿ ಅವರು ಎಲ್ಲರಿಗೂ ಪ್ರೇರಣೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.