ದಾವಣಗೆರೆ: ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸ್ ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸ್ ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ 10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ದೂರು ನೀಡಿದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ ಎಂದರು. ಸಮೀಕ್ಷೆ ನಡೆಯುತ್ತಿದೆ ಎಂದರು.
ಅಡ್ವಾಣಿಯವರಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಮಾತನಾಡಿ ಕೊಡಲಿ, ಬೇಡ ಎಂದು ನಾವು ಹೇಳಿಲ್ಲ. ನಾನು ತುಮಕೂರು ಸಿದ್ಧಗಂಗಸ್ವಾಮಿಗಳಿಗೆ ಕೊಡಬೇಕು ಎಂದು ತಿಳಿಸಿ ಪತ್ರ ಬರೆದಿದ್ದೆ ಎಂದರು.