alex Certify BREAKING : ‘ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನ’ಕ್ಕೆ ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನ’ಕ್ಕೆ ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ

ದಾವಣಗೆರೆ : ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು. ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದರು.

ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಬೇಕು ಎಂದರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಿಕೋದ್ಯಮ ಸಾಧ್ಯ.

ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ, ಬಡವರ ಹಿತಾಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು. ಸ್ವಾತಂತ್ರ್ಯಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...