alex Certify ‘ರಾಜ್ಯದಲ್ಲಿ ಪಂಪ್ ಸ್ಟೋರೇಜ್ ಪ್ಲಾಂಟ್ಸ್ ಗಳ ನಿರ್ಮಾಣಕ್ಕೆ 8500 ಕೋಟಿ ರೂಗಳ ಯೋಜನೆ’ : ಸಚಿವ ಕೆ.ಜೆ ಜಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಜ್ಯದಲ್ಲಿ ಪಂಪ್ ಸ್ಟೋರೇಜ್ ಪ್ಲಾಂಟ್ಸ್ ಗಳ ನಿರ್ಮಾಣಕ್ಕೆ 8500 ಕೋಟಿ ರೂಗಳ ಯೋಜನೆ’ : ಸಚಿವ ಕೆ.ಜೆ ಜಾರ್ಜ್

ಶಿವಮೊಗ್ಗ : ರಾಜ್ಯದಲ್ಲಿ ಕೆ.ಪಿ.ಸಿ.ಎಲ್ ವತಿಯಿಂದ ಪಂಪ್ ಸ್ಟೋರೇಜ್ ಪ್ಲಾಂಟ್ಸ್ಗಳ ನಿರ್ಮಾಣಕ್ಕೆ ಸುಮಾರು 8500ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಹೇಳಿದರು.

ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಮೆಸ್ಕಾಂ ವ್ಯಾಪ್ತಿಯೊಳಗಿನ ವಿದ್ಯುತ್ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಪ್ರಗತಿ ಕುರಿತು ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕುಸುಮ್ ಯೋಜನೆಯಡಿ ರಾಜ್ಯದಲ್ಲಿ 750ಹೊಸ ವಿದ್ಯುತ್ ಸ್ಥಾವರಗಳ ಸ್ಥಾಪನೆಗೆ ಸಂಬಂಧಿಸಿದಂತೆ ಖಾಸಗಿಯವರೊಂದಿಗೆ ಈಗಾಗಲೇ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದರು.

ಶಿವಮೊಗ್ಗ ಸಮೀಪದ 220ಕೆ.ವಿ. ವಿದ್ಯುತ್ ಸ್ವೀಕರಣ ಕೇಂದ್ರಕ್ಕೆ 100ಎಂ.ವಿ.ಎ. ಅಧಿಕಶಕ್ತಿ ಪರಿವರ್ತಕ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಅವರು, ಶಿವಮೊಗ್ಗ ನಗರದ ಹೊರವಲಯದಲ್ಲಿರುವ ದೇವಕಾತಿಕೊಪ್ಪ ಮತ್ತು ಸಿದ್ಲೀಪುರ ಕೈಗಾರಿಕಾ ಪ್ರದೇಶಕ್ಕೆ ಹೊಸದಾಗಿ ವಿದ್ಯುತ್ ಉಪಕೇಂದ್ರ ಸ್ಥಾಪಿಸುವ ವಿಷಯಕ್ಕೆ ಸಂಬಂಧಿಸಿದಂತೆ ಇಲಾಖೆ ಸಚಿವರೊಂದಿಗೆ ಸಮಾಲೋಚನೆ ನಡೆಸಿ, ಕ್ರಮವಹಿಸಲಾಗುವುದು ಎಂದರು.

ರೈತರು ತಮ್ಮ ಹೊಲಗಳಲ್ಲಿನ ಬೆಳೆಗಳಿಗೆ ಕೊಳವೆಬಾವಿಗಳಿಂದ ನೀರನ್ನು ಪಡೆದುಕೊಳ್ಳಲು ಅವಶ್ಯವಿರುವ ವಿದ್ಯುತ್ಗಾಗಿ ಸೋಲಾರ್ ವ್ಯವಸ್ಥೆಯನ್ನು ನಿರ್ಮಿಸಿಕೊಳ್ಳುವವರಿಗಾಗಿ ಶೇ.80ರಷ್ಟು ಸಹಾಯಧನವನ್ನು ಸರ್ಕಾರದಿಂದ ನೀಡಲಾಗುವುದು. ಈ ವಿದ್ಯುತ್ನಿಂದ ಸುಮಾರು 10ಹೆಚ್.ಪಿ.ವರೆಗಿನ ಮೋಟಾರ್ ಯಂತ್ರಗಳನ್ನು ನಡೆಸಬಹುದಾಗಿದೆ ಎಂದ ಅವರು, ಹೊಳಲೂರು ಮತ್ತು ಬೆಜ್ಜವಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ 220ಕೆ.ವಿ. ವಿದ್ಯುತ್ ಉಪಕೇಂದ್ರವನ್ನು ಸ್ಥಾಪಿಸಲು ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡಲಾಗುವುದು ಎಂದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...