![](https://kannadadunia.com/wp-content/uploads/2024/02/monkey.jpg)
ಚಿಕ್ಕಮಗಳೂರು : ರಾಜ್ಯದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವೃದ್ಧರೊಬ್ಬರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರೆಡ್ ಝೋನ್ನಲ್ಲಿ ತಪಾಸಣೆ ಮಾಡಿದಾಗ ವೃದ್ಧನಲ್ಲಿ ಕೆಎಫ್ಡಿ ಪತ್ತೆಯಾಗಿದೆ.
ಚಿಕ್ಕಮಗಳೂರಿನಲ್ಲಿ ವಾರದಲ್ಲಿ ಮೂರು ಜನರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿತ್ತು. ಇದೀಗ ಸೋಂಕಿಗೆ ವೃದ್ಧ ಬಲಿಯಾಗಿದ್ದು, ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ10 ದಿನಗಳಲ್ಲಿ ಬರೊಬ್ಬರಿ 21 ಜನರಿಗೆ ಸೋಂಕು ತಗುಲಿದೆ.