ತುಮಕೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವರ್ಷಕ್ಕೊಮ್ಮೆ ಸರ್ಕಾರಿ ನೌಕರರಿಗೆ ಆರೋಗ್ಯ ತಪಾಸಣೆ ಆಯೋಜನೆಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸದಾ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಸರ್ಕಾರದ ವತಿಯಿಂದ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಸರ್ಕಾರಿ ನೌಕರರಿಗೆ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.