ಬೆಂಗಳೂರು : ರಾಜ್ಯದ ಬರಪೀಡಿತ ತಾಲೂಕುಗಳಲ್ಲಿರುವ ಮಕ್ಕಳು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯು ಮುಂಬರುವ ಏಪ್ರಿಲ್- ಮೇ ತಿಂಗಳಿನಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡಲು ನಿರ್ಧರಿಸಿದೆ.
ರಾಜ್ಯದಲ್ಲಿ ಘೋಷಣೆಯಾಗಿರುವ 223 ಬರಪೀಡಿತ ತಾಲೂಕುಗಳಲ್ಲಿರುವ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ಊಟ ವಿತರಿಸುವ ಕುರಿತಂತೆ ಈಗಾಗಲೇ ಅದೇಶ ಹೊರಡಿಸಲಾಗಿದೆ.
2023-24 ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರ ಪೀಡಿತ ತಾಲ್ಲೂಕುಗಳೆಂದು ಕರ್ನಾಟಕ ಸರ್ಕಾರ ಘೋಷಿಸಿದ್ದು, ಏಪ್ರಿಲ್2024 ಮತ್ತು ಮೇ 2024 ಮಾಹೆಗಳ ಬೇಸಿಗೆ ರಜಾ ಅವಧಿಯಲ್ಲಿ ಪಿ.ಎಂ.ಪೋಷಣ್ -ಮಧ್ಯಾಹ್ನ ಉಪಾಹಾರ ಯೋಜನೆಯಡಿ ಬಿಸಿಯೂಟವನ್ನು ಶಾಲಾ ಮಕ್ಕಳಿಗೆ ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.