![](https://kannadadunia.com/wp-content/uploads/2024/02/dinesh-gundurao.jpg)
ಬೆಂಗಳೂರು : ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ‘ಕ್ಯಾನ್ ವಾಕ್’ ಜಾಗೃತಿ ನಡಿಗೆ ಕಾರ್ಯಕ್ರಮಕ್ಕೆ ಇಂದು ಕಂಠೀರವ ಕ್ರೀಡಾಂಗಣದಲ್ಲಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದಾರೆ.
ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಕೈ ಜೋಡಿಸಿ” ಘೋಷವಾಕ್ಯದಡಿಯಲ್ಲಿ ನಡೆದ 5 ಕಿಲೋಮೀಟರ್ ವಾಕಥಾನ್’ನಲ್ಲಿ ಸಾವಿರಾರು ಸಾರ್ವಜನಿಕರ ಜೊತೆಗೆ ಹೆಜ್ಜೆ ಹಾಕಿದ್ದಾರೆ.
ನಿಯಮಿತ ವ್ಯಾಯಾಮ, ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಸೇರಿದಂತೆ ಆರೋಗ್ಯಪೂರ್ಣ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಮೂಲಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಅನ್ನು ಪತ್ತೆ ಮಾಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಬಹುದಾಗಿದೆ. ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಒಂದಾಗೋಣ ಎಂದು ಕರೆ ಕೊಟ್ಟಿದ್ದಾರೆ.