HomeKarnatakaBREAKING : ದೇಶವಿಭಜನೆ ಬಗ್ಗೆ ನಾನು ಹೇಳಿಕೆ ನೀಡಿಲ್ಲ : ಸಂಸದ ಡಿ.ಕೆ ಸುರೇಶ್ ಯೂ...

BREAKING : ದೇಶವಿಭಜನೆ ಬಗ್ಗೆ ನಾನು ಹೇಳಿಕೆ ನೀಡಿಲ್ಲ : ಸಂಸದ ಡಿ.ಕೆ ಸುರೇಶ್ ಯೂ ಟರ್ನ್

ಬೆಂಗಳೂರು : ದೇಶವಿಭಜನೆ ಬಗ್ಗೆ ನಾನು ಹೇಳಿಲ್ಲ ಎಂದು ಸಂಸದ ಡಿಕೆ ಸುರೇಶ್ ( D.K Suresh ) ಯೂ ಟರ್ನ್ ಹೊಡೆದಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಸುರೇಶ್ ‘ನನ್ನ ಹೇಳಿಕೆಯನ್ನು ಬಿಜೆಪಿಯವರು ತಿರುಚುತ್ತಿದ್ದಾರೆ,: ದೇಶವಿಭಜನೆ ಬಗ್ಗೆ ನಾನು ಹೇಳಿಲ್ಲ.  ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ, ಹೋರಾಟ ಮಾಡಲು ಎಲ್ಲರಿಗೂ ಹಕ್ಕಿದೆ. ಬಿಜೆಪಿ ಹೋರಾಟಕ್ಕೆ ನನ್ನ ಸಹಕಾರವಿದೆ, ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದು ಸಂಸದ ಡಿಕೆ ಸುರೇಶ್ ಯೂ ಟರ್ನ್ ಹೊಡೆದಿದ್ದಾರೆ.

ದೇಶ ವಿಭಜನೆ ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಬೆಂಗಳೂರಿನ ಸದಾಶಿವನಗರದಲ್ಲಿರುವ ಸಂಸದ ಡಿ.ಕೆ.ಸುರೇಶ್ ನಿವಾಸದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿ.ಕೆ.ಸುರೇಶ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಿಜೆಪಿಯ ಹಲವು ಕಾರ್ಯಕರ್ತರನ್ನು ಪೊಲೀಸರು ಬಸ್ ಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ‘ಪ್ರತ್ಯೇಕ ರಾಷ್ಟ್ರ’ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಒಂದು ದಿನದ ನಂತರ, ಬಿಜೆಪಿ ಈ ವಿಷಯವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಎತ್ತಿದೆ .ಕಾಂಗ್ರೆಸ್ ಕ್ಷಮೆಯಾಚಿಸಬೇಕು ಮತ್ತು ನೈತಿಕ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಅನ್ನು ಟೀಕಿಸಿದ ಸುರೇಶ್, ಕೇಂದ್ರವು ದಕ್ಷಿಣದ ರಾಜ್ಯಗಳಿಗೆ ಹಣವನ್ನು ನಿರಾಕರಿಸುತ್ತಿದೆ ಎಂದು ಆರೋಪಿಸಿದರು ಮತ್ತು ಈ ಪ್ರವೃತ್ತಿ ಮುಂದುವರಿದರೆ ‘ಪ್ರತ್ಯೇಕ ರಾಷ್ಟ್ರ’ದ ಧ್ವನಿ ಎತ್ತುವುದಾಗಿ ಬೆದರಿಕೆ ಹಾಕಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular