ಬೆಳಗಾವಿ : ಪಾದಚಾರಿಗಳ ಮೇಲೆ ಟ್ರಾಕ್ಟರ್ ಪಲ್ಟಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಕಾಗವಾಡ ತಾಲೂಕಿನ ಶೇಡಬಾಳದಲ್ಲಿ ಈ ಘಟನೆ ನಡೆದಿದೆ. ಕೃಷಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮಾಲವ್ವ ಐನಾಪುರೆ, ಚಂಪಾ ತಾಳಿಕಟ್ಟಿ , ಭಾರತಿ ಎಂಬುವವರು ಮೃತಪಟ್ಟಿದ್ದಾರೆ. ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವೇಗವಾಗಿ ಬಂದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.