HomeKarnatakaBREAKING NEWS: ಹಂಪಿ ಉತ್ಸವದ ಮುಖ್ಯ ವೇದಿಕೆ ಬಳಿ ಬೆಂಕಿ ಅವಘಡ

BREAKING NEWS: ಹಂಪಿ ಉತ್ಸವದ ಮುಖ್ಯ ವೇದಿಕೆ ಬಳಿ ಬೆಂಕಿ ಅವಘಡ

ವಿಜಯನಗರ: ವಿಶ್ವ ವಿಖ್ಯಾತ ಹಂಪಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಹಂಪಿ ಉತ್ಸವದ ಮುಖ್ಯ ವೇದಿಕೆಯ ಹಿಂಭಾಗ ಬೆಂಕಿ ಬಿದ್ದಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆಯುತ್ತಿರುವ ಉತ್ಸವದ ಮುಖ್ಯ ವೇದಿಕೆ ಗಾಯತ್ರಿ ಪೀಠದ ಪಕ್ಕದಲ್ಲಿದ್ದ ಬಿದರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾರೋ ಸಿಗರೇಟ್ ಸೇದಿ ಎಸೆದಿರುವ ಕಾರಣ ಒಣಗಿದ ಬಿದರಿಗೆ ಬೆಂಕಿ ಹೊತ್ತಿಕೊಂಡಿದೆ.

ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲ. ಅಗ್ನಿಶಾಮ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular