HomeKarnatakaಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ: ಪ್ರೀತಂ ಗೌಡ ವಿಶ್ವಾಸ

ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ: ಪ್ರೀತಂ ಗೌಡ ವಿಶ್ವಾಸ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳು ಬಿಜೆಪಿ ಪಾಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕಾರಣಿಯಲ್ಲಿ ಟಿಕೆಟ್ ಹಂಚಿಕೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಎನ್.ಡಿ.ಎ. ಮೈತ್ರಿಕೂಟ ಸೇರ್ಪಡೆಯಾಗಿದೆ. ಆದರೆ, ಟಿಕೆಟ್ ಹಂಚಿಕೆ ಇನ್ನೂ ಅಂತಿಮವಾಗಿಲ್ಲ. ಹಾಸನ ಮತ್ತು ಮಂಡ್ಯ ಕ್ಷೇತ್ರಗಳು ಬಿಜೆಪಿಗೆ ಸಿಗುವ ವಿಶ್ವಾಸ ಕಾರ್ಯಕರ್ತರಲ್ಲಿದ್ದು, ಜೆಡಿಎಸ್ ಗೆ ಈ ಕ್ಷೇತ್ರಗಳನ್ನು ಬಿಟ್ಟು ಕೊಡುವುದಾದರೆ ಬಿಜೆಪಿ ಕಾರ್ಯಕರ್ತರ ಒಪ್ಪಿಗೆ ಪಡೆಯಬೇಕು ಎಂದು ಹೇಳಿದ್ದಾರೆ.

ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಬಾರದು ಎಂದು ಪಕ್ಷದ ಬಹುತೇಕ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ವಿಚಾರವನ್ನು ರಾಜ್ಯ ನಾಯಕರ ಗಮನಕ್ಕೆ ತರಲಾಗುವುದು. ರಾಜ್ಯಾಧ್ಯಕ್ಷರೊಂದಿಗೆ ಈ ಬಗ್ಗೆ ಚರ್ಚೆ ನಡೆಸುವುದಾಗಿ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಮಂಡ್ಯ, ಹಾಸನ ಸೇರಿ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಇತ್ತು. ಮಂಡ್ಯದಲ್ಲಿ ಜೆಡಿಎಸ್ ಗೆದ್ದಿರುವುದು ಈಗ ಒಂದು ಕ್ಷೇತ್ರದಲ್ಲಿ ಮಾತ್ರ. ಬಿಜೆಪಿ ಕೂಡ ಜೆಡಿಎಸ್ ನಷ್ಟೇ ಪ್ರಾಬಲ್ಯ ಹೊಂದಿದ್ದು, ಕಾರ್ಯಕರ್ತರು ನಮ್ಮ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular