![](https://kannadadunia.com/wp-content/uploads/2020/05/sslc-result_710x400xt.jpg)
ಬೆಂಗಳೂರು : ಎಸ್.ಎಸ್. ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ವಿದ್ಯಾರ್ಥಿಗಳಿಂದ 50 ರೂ. ಶುಲ್ಕ ಸಂಗ್ರಹದ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟನೆ ನೀಡಿದೆ.
ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆಗೆ 50 ರೂ. ಶುಲ್ಕ ಸಂಗ್ರಹ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಇದಕ್ಕೆ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದ್ದು, ಕಳೆದ ನಾಲ್ಕು ವರ್ಷಗಳಿಂದಲೂ ಈ ಶುಲ್ಕ ಇದೆ. ಪರೀಕ್ಷೆ ನಡೆಸಲು ವೆಚ್ಚಕ್ಕೆ ಪ್ರತಿ ವಿದ್ಯಾರ್ಥಿಯಿಂದ 50 ರೂ. ಸಂಗ್ರಹ ಮಾಡಲಾಗುತ್ತದೆ ಎಂದ ಸ್ಪಷ್ಟೀಕರಣ ನೀಡಿದೆ.
ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ವಿದ್ಯಾರ್ಥಿಗಳಿಂದ 50 ರೂ. ಶುಲ್ಕ ಸಂಗ್ರಹಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.