HomeKarnatakaತಮ್ಮ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಕಡೆ ಬೊಟ್ಟು ಮಾಡ್ತಿದ್ದಾರೆ; ಸಿಎಂ ವಿರುದ್ಧ ಮಾಜಿ ಸಿಎಂ...

ತಮ್ಮ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಕಡೆ ಬೊಟ್ಟು ಮಾಡ್ತಿದ್ದಾರೆ; ಸಿಎಂ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಬಿಡಿಗಡೆಯಲ್ಲಿ ಅನ್ಯಾಯ ಎಂದಿರುವ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬೆಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಯುಪಿಎ ಸರ್ಕಾರದ ಅವಧಿಯಲ್ಲಿ ತೆರಿಗೆ ಪರಿಹಾರ 81,785 ಕೋಟಿ ರೂ. ಇತ್ತು. ಎನ್​ಡಿಎ ಅವಧಿಯಲ್ಲಿ 2.90 ಲಕ್ಷ ಕೋಟಿ ರೂ. ತೆರಿಗೆ ಪರಿಹಾರ ಬಂದಿದೆ. ಆದಾರೂ ಸಿಎಂ ಸಿದ್ದರಾಮಯ್ಯ ಆರೋಪ ಮಡುತ್ತಿದ್ದಾರೆ. ತಮ್ಮ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಈಗ ಕೇಂದ್ರದ ವಿರುದ್ಧ ಬೊಟ್ಟು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ನಯಾಪೈಸೆ ಬರ ಪರಿಹಾರವನ್ನು ರೈತರಿಗೆ ಕೊಟ್ಟಿಲ್ಲ. ಕಾಂಗ್ರೆಸ್ ನವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿ ಆರಂಭವಾಗಿದೆ. ಹಾಗಾಗಿ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ. ಕೇಂದ್ರದಿಂದ ಅನ್ಯಾಯವಾಗಿದೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಕಾಂಗ್ರೆಸ್ ನ ರಾಜಕೀಯ ಸ್ಟಂಟ್ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular