ಬೆಂಗಳೂರು : ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 07ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ರಾಜ್ಯಕ್ಕೆ ಬರಬೇಕಿರುವ ಪಾಲನ್ನು ಕೇಳಲು ಜ.7ರಂದು ದೆಹಲಿಯಲ್ಲಿನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯದ ಎಲ್ಲಶಾಸಕರು, ಸಚಿವರು ಸೇರಿದಂತೆ 166 ಮಂದಿ ಭಾಗವಹಿಸುತ್ತಿದ್ದೇವೆ’’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.
ಭದ್ರಾ ಯೋಜನೆಗೆ 5,300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರ ಪರಿಹಾರದ ಹಣವೂ ಇಲ್ಲ. ನರೇಗಾ ಅಡಿ 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದೇಶದ ಜನರ ಗಮನ ಸೆಳೆಯಬೇಕು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರ ಪರಿಹಾರದಲ್ಲಿ ತೋರಿರುವ ಮಲತಾಯಿ ಧೋರಣೆ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಶಾಸಕರು, ಮೇಲ್ಮನೆ ಶಾಸಕರು ಭಾಗವಹಿಸುತ್ತಿದ್ದಾರೆ.
14ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71% ಇದ್ದದ್ದು, 15ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಕೆಯಾಯಿತು. ಅಂದರೆ ಶೇ 1.07% ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ಐದು ವರ್ಷಗಳಲ್ಲಿ ನಗದು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳು ಕರ್ನಾಟಕಕ್ಕೆ ಕಡಿಮೆಯಾಗಲಿದೆ.
ಹಣಕಾಸು ಆಯೋಗ ನಗದು ಹಂಚಿಕೆ ಮಾಡುವಾಗ ಶೇ 4.71 ರಿಂದ ಶೇ 3.74 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು 5,495 ಕೋಟಿ ರೂ.ಗಳ ವಿಶೇಷ ಅನುದಾನ ನೀಡಲು ಶಿಫಾರಸ್ಸು ಮಾಡಲಾಗಿತ್ತು. ಮಧ್ಯಂತರ ಬಜೆಟ್ ನಲ್ಲಿ ಈ ಬಗ್ಗೆ ಶಿಫಾರಸ್ಸು ಮಾಡಿದರು. ಈ ಹಣವೂ ರಾಜ್ಯಕ್ಕೆ ಬರಲಿಲ್ಲ.
ಈ ಮೊತ್ತವನ್ನು ಕೇಂದ್ರ ಸರ್ಕಾರವನ್ನು ಕೇಳಿ ಪಡೆಯಲು ವಿಧಾನಸಭೆಯಲ್ಲಿ ವಿಷಯ ಮಂಡಿಸಿದ್ದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ತಿರಸ್ಕರಿಸಿದರು. ಅಂತಿಮ ವರದಿಯಲ್ಲಿ 3000 ಕೋಟಿ ರೂ. ಫೆರಿಫೆರಲ್ ರಿಂಗ್ ರೋಡಿಗೆ, ಕೆರೆಗಳನ್ನು ಅಭಿವೃದ್ಧಿ ಪಡಿಸಲು ರೂ.3,000 ಕೋಟಿ ಸೇರಿ 6000 ಕೋಟಿ ರೂ. ಗಳನ್ನು ಹೆಚ್ವರಿಯಾಗಿ ಕೊಡಲು ಶಿಫಾರಸು ಮಾಡಲಾಯಿತು. ಈ ಹಣವೂ ಬರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.