HomeIndiaಅರಣ್ಯ ಭೂಮಿ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಮೂವರು ತಹಶೀಲ್ದಾರ್ ಗಳ ವಿರುದ್ಧ ಎಫ್ಐಆರ್

ಅರಣ್ಯ ಭೂಮಿ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಮೂವರು ತಹಶೀಲ್ದಾರ್ ಗಳ ವಿರುದ್ಧ ಎಫ್ಐಆರ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬಳ್ಳಾವರದ ಸಮೀಪ ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪದಲ್ಲಿ ಮೂವರು ತಹಶೀಲ್ದಾರ್ ಗಳ ವಿರುದ್ಧ ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ. ಇವರಲ್ಲಿ ಇಬ್ಬರು ನಿವೃತ್ತರಾಗಿದ್ದಾರೆ.

ಬಳ್ಳಾವರ ಗ್ರಾಮದ ಸರ್ವೇ ನಂಬರ್ 22ರಲ್ಲಿ 353 ಎಕರೆ ಅರಣ್ಯ ಭೂಮಿ ಇದೆ. 1930 ರಲ್ಲಿ ಅರಣ್ಯ ಭೂಮಿ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಸರ್ವೇ ನಂಬರ್ ನಲ್ಲಿ ಕಂದಾಯ ಭೂಮಿ ಇರುವುದಿಲ್ಲ. ಆದರೆ, 1999, 2005, 2022 ರಲ್ಲಿ ಖಾಸಗಿ ವ್ಯಕ್ತಿಗಳಿಗೆ ಈ ಭೂಮಿ ಮಂಜೂರು ಮಾಡಲಾಗಿದೆ.

ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ತಹಶೀಲ್ದಾರ್ ಗಳಾದ ಕೆ.ಎನ್. ನಾರಾಯಣಪ್ಪ, ಜಿ.ಎಸ್. ನಾಗರಾಜ್ ಮತ್ತು ಪೂರ್ಣಿಮಾ ಅವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದಾರೆ. ಪೂರ್ಣಿಮಾ ಅವರು ಕೆ.ಆರ್. ನಗರದಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಉಳಿದ ಇಬ್ಬರು ನಿವೃತ್ತರಾಗಿದ್ದಾರೆ. ತರೀಕೆರೆ ಜೆಎಂಎಫ್ ಸಿ ಕೋರ್ಟ್ ಅನುಮತಿ ಪಡೆದು ಈ ಮೂವರು ತಹಶೀಲ್ದಾರ್ ಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular