ಬಾಗಲಕೋಟೆ : ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಡವಳೇಶ್ವರ ಗ್ರಾಮದಲ್ಲಿ ನಡೆದಿದೆ.
ಈರಪ್ಪ ಗರಸಂಗಿ (50) ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.