ಬೆಂಗಳೂರು : ಬೆಂಗಳೂರಿನಲ್ಲಿ ಮಗನಿಂದಲೇ ತಾಯಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಕೊಲೆ ಮಾಡಿದ್ದು ಮಗ ಅಲ್ಲ ಅಪ್ಪ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಬೆಂಗಳೂರಿನ ಕೆ ಆರ್ ಪುರಂನ ಭೀಮಯ್ಯ ಲೇಔಟ್ ನಲ್ಲಿ ಈ ಘಟನೆ ನಡೆದಿತ್ತು.
ಕೊಲೆಯಾದ ಮಹಿಳೆಗೆ ಪರ ಪುರುಷನ ಜೊತೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಇದರಿಂದ ಪತಿಯೇ ತನ್ನ ಪತ್ನಿಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಹಲ್ಲೆ ಮಾಡಿದ ರಾಡ್ ನಲ್ಲಿ ಗಂಡನ ಫಿಂಗರ್ ಪ್ರಿಂಟ್ ಇದ್ದು, ಪತಿಯೇ ಪತ್ನಿಯನ್ನು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಕೊಲೆಯಾದ ಮಹಿಳೆಯನ್ನು ನೇತ್ರಾ (40) ಎಂದು ಗುರುತಿಸಲಾಗಿದೆ.
ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಆಗುತ್ತದೆ , ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸುತ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದನು ಎನ್ನಲಾಗಿದೆ. ಆದ್ದರಿಂದ ಮಗ ಪೊಲೀಸ್ ಠಾಣೆಗೆ ಮುಂದೆ ನಾನೇ ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿ ಪೊಲೀಸರಿಗೆ ಶರಣಾಗಿದ್ದನು. ನಂತರ ತನಿಖೆ ನಡೆಸಿದ ಪೊಲೀಸರಿಗೆ ನಿಜಾಂಶ ಗೊತ್ತಾಗಿದೆ.