ಮೈಸೂರು : ರಾಜ್ಯದ ಶಾಲಾ ಮಕ್ಕಳಿಗೆ ಇನ್ಮುಂದೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈಗಾಗಲೇ ಕ್ಷೀರಭಾಗ್ಯ ಯೋಜನೆ ಜಾರಿಯಲ್ಲಿದೆ. ವಾರಕ್ಕೆ ಮೂರು ದಿನ ಹಾಲು ಕೊಡುತ್ತಿದ್ದೇವೆ, ಹಾಲಿಗೆ ರಾಗಿ ಮಾಲ್ಟ್ ಪೌಡರ್ ಹಾಕಿ ಕೊಡಲು ಚಿಂತನೆ ನಡೆಸಿದ್ದೇವೆ, ಶೀಘ್ರದಲ್ಲೇ ಯೋಜನೆ ಜಾರಿಗೆ ತರಲಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಈ ಹಿಂದೆ ವಾರಕ್ಕೆ ಒಂದು ಮೊಟ್ಟೆ ಕೊಡುತ್ತಿದ್ದರು, ಈಗ ನಾವು ಎರಡು ಮೊಟ್ಟೆ ಕೊಡುತ್ತಿದ್ದೇವೆ. ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.