alex Certify ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವವನ್ನು ಹೊಂದಿರುವ ದೇಶ ಭಾರತ : ಬಿ.ವೈ ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವವನ್ನು ಹೊಂದಿರುವ ದೇಶ ಭಾರತ : ಬಿ.ವೈ ವಿಜಯೇಂದ್ರ

ಶಿವಮೊಗ್ಗ : ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವವನ್ನು ಹೊಂದಿರುವ ದೇಶ ನಮ್ಮ ಭಾರತ ಎಂದು ಶಾಸಕರಾದ ಬಿ ವೈ ವಿಜಯೇಂದ್ರ ಅವರು ತಿಳಿಸಿದರು.

ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ,ವಿವಿಧ ಇಲಾಖೆಯ ಸಹಯೋಗದೊಂದಿಗೆ ಫೆ.04 ರಂದು ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನಕ್ಕೆ ಅಡಿಪಾಯವನ್ನು ಹಾಕಿಕೊಟ್ಟವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಬಿ ಆರ್ ಅಂಬೇಡ್ಕರ್ರವರು. ಇಡೀ ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದು. ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಮ್ಮಂತಹ ದೊಡ್ಡ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಯಶಸ್ವಿಯಾಗಿ ಜಾರಿಗೆ ತರಲು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿಆರ್ ಅಂಬೇಡ್ಕರ್ ಅವರ ಪಾತ್ರ ಅತ್ಯಂತ ಅಮೂಲ್ಯವಾಗಿದೆ ಅವರು ಹಾಕಿಕೊಟ್ಟ ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಜೀವಿಸುತ್ತಿದ್ದೇವೆ.

ಶಾಸಕಾಂಗ, ಕಾರ್ಯಾಂಗ , ನ್ಯಾಯಾಂಗದ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಸಮಾನ ನ್ಯಾಯವನ್ನು ಒದಗಿಸುವ ಉದ್ದೇಶವನ್ನು ಸಂವಿಧಾನವು ಹೊಂದಿದೆ. ಈ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆ ಪ್ರತಿ ಹಳ್ಳಿ ಹಳ್ಳಿಗೂ ಸಂಚರಿಸಿ ಜಾಗೃತಿಯನ್ನು ಮೂಡಿಸಲಿದ್ದು ಅತಿ ಮುಖ್ಯವಾಗಿ ವಿದ್ಯಾರ್ಥಿಗಳು ಹಾಗೂ ಸಮಾಜದ ನಾಗರೀಕರು ಇದರ ಅರಿವನ್ನು ಪಡೆದುಕೊಳ್ಳುವುದು ಅತಿ ಅವಶ್ಯಕವಾಗಿದೆ ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...