ಬೆಂಗಳೂರು : ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ ಎಂಬಂತೆ ಶೇ.50 ರಷ್ಟು ತೆರಿಗೆ ಪಾವತಿಸುವಂತೆ ಬಿಬಿಎಂಪಿ ಆಫರ್ ನೀಡಿದೆ.
ಹೌದು, ತೆರಿಗೆ ಬಾಕಿ ಉಳಿಸಿಕೊಂಡ ಕಟ್ಟಡ ಮಾಲೀಕರಿಗೆ ಬಿಬಿಎಂಪಿ ಆಫರ್ ನೀಡಿದ್ದು, ಶೇಕಡ 50 ರಷ್ಟು ತೆರಿಗೆ ಪಾವತಿಸುವಂತೆ ಸೂಚನೆ ನೀಡಿದೆ. ಈ ಮೂಲಕ ಅರ್ಧದಷ್ಟಾದರೂ ಟಾರ್ಗೆಟ್ ರೀಚ್ ಮಾಡಲು ಬಿಬಿಎಂಪಿ ಪ್ಲ್ಯಾನ್ ಮಾಡಿದೆ. ಆಸ್ತಿ ತೆರಿಗೆ ವಸೂಲಿ ಟಾರ್ಗೆಟ್ ರೀಚ್ ಮಾಡಲು ಬಿಬಿಎಂಪಿ ಹೊಸ ಅಸ್ತ್ರ ಹೂಡಿದ್ದು, ಶೇ.50 ರಷ್ಟು ಆಸ್ತಿ ತೆರಿಗೆ ಪಾವತಿಸುವಂತೆ ತೆರಿಗೆದಾರರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.
ಬಾಕಿ ಇರೋ ತೆರಿಗೆಯಲ್ಲಿ ಅರ್ಧದಷ್ಟು ತೆರಿಗೆ ಪಾವತಿ ಮಾಡಿ ಅಪೀಲು ಸಲ್ಲಿಸಿದವರಿಗೆ ಮಾತ್ರ ತೆರಿಗೆ ರಿಯಾಯಿತಿ ನೀಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಸ್ಥಳೀಯ ಪಾಲಿಕೆ ಕಂದಾಯ ಕಚೇರಿಯಲ್ಲಿ ಅರ್ಧ ತೆರಿಗೆ ಕಟ್ಟಿ, ಉಳಿದ ಅರ್ಧ ತೆರಿಗೆ ಮನ್ನಾ ಮಾಡಬೇಕು. ನೋಟಿಸ್ ಪಡೆದ ತೆರಿಗೆದಾರರು ಅರ್ಧದಷ್ಟು ತೆರಿಗೆ ಪಾವತಿಸಿ ನಂತರ ಪಾಲಿಕೆಗೆ ಅಪೀಲ್ ಸಲ್ಲಿಸಬೇಕು. ಬಾಕಿ ಇರೋ ತೆರಿಗೆಯಲ್ಲಿ ಅರ್ಧದಷ್ಟು ತೆರಿಗೆ ಪಾವತಿ ಮಾಡಿ ಅಪೀಲು ಸಲ್ಲಿಸಿದವರಿಗೆ ಮಾತ್ರ ತೆರಿಗೆ ರಿಯಾಯಿತಿ ನೀಡಲಾಗುತ್ತದೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ.