alex Certify ʻನಮ್ಮ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿಗಳ ಸಂಘ ರಚನೆ : ರಾಜ್ಯ ಸರ್ಕಾರದಿಂದ ಸುತ್ತೋಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻನಮ್ಮ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿಗಳ ಸಂಘ ರಚನೆ : ರಾಜ್ಯ ಸರ್ಕಾರದಿಂದ ಸುತ್ತೋಲೆ

ಬೆಂಗಳೂರು : ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ರಾಜ್ಯದ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶಾಲಾ ಹಳೆ ವಿದ್ಯಾರ್ಥಿಗಳ ಸಂಘ (ALUMNI ASSOCIATION) ರಚಿಸುವ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಶಾಲೆಗಳನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದೆ. ಸದರಿ ಯೋಜನೆಗಳ ಅನುಷ್ಠಾನದ ಪ್ರಕ್ರಿಯೆಗಳಲ್ಲಿ ಸರ್ಕಾರದೊಂದಿಗೆ ಸಮುದಾಯದ ಸಹಭಾಗಿತ್ವದಿಂದ ವೈಯಕ್ತಿಕ/ಸಾಮೂಹಿಕ ಬೆಂಬಲ ಮತ್ತು ಸಂಪನ್ಮೂಲಗಳು ದೊರಕಿದರೆ ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಬಹುದಾಗಿದೆ ಎಂಬುದು ಸರ್ಕಾರದ ಆಶಯವಾಗಿದೆ. ಈ ಹಿನ್ನಲೆಯಲ್ಲಿ ” ನಮ್ಮ ಶಾಲೆ ನಮ್ಮ ಜವಬ್ದಾರಿ” ಎಂಬ ಕಾರ್ಯಕ್ರಮವನ್ನು ಪ್ರಸ್ತುತ ಸಾಲಿನಿಂದ ರೂಪಿಸಿ, ಯಸ್ವಿಯಾಗಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ಪ್ರಯುಕ್ತ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಈ ಹಿಂದೆ ವ್ಯಾಸಂಗ ಮಾಡಿರುವ ಹಳೆ ವಿದ್ಯಾರ್ಥಿಗಳನ್ನು ಗುರುತಿಸಿ ಶಾಲೆಯ ಪಾರಂಪರಿಕ ಹಿನ್ನೆಲೆಯೊಂದಿಗೆ ಭಾವನಾತ್ಮಕ ಸಂಬಂಧ ಬೆಸೆಯಲು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳ ವಿದ್ಯಾರ್ಥಿಗಳ ಸಂಘ (ALUMNI ASSOCIATION)ವನ್ನು ದಿನಾಂಕ: 31-ಮಾರ್ಚ್-2024 ರ ಅಂತ್ಯದೊಳಗಾಗಿ ರಚಿಸುವುದು. ಈ ಮುಖೇನ ಶಾಲೆಯನ್ನು ಶೈಕ್ಷಣಿಕವಾಗಿ ಮತ್ತಷ್ಟು ಬಲವರ್ಧನೆಗೊಳಿಸಲು ಅಗತ್ಯವಿರುವ ಗ್ರಂಥಾಲಯ, ಪ್ರಯೋಗಾಲಯ, ಕ್ರೀಡಾಲಯ, ಪೀಠೋಪಕರಣಗಳು, ಪಾಠೋಪಕರಣಗಳು, ವಿಜ್ಞಾನ ಉಪಕರಣಗಳು, SMART CLASS ಹಾಗೂ ಇ-ಕಲಿಕಾ ಕೇಂದ್ರ ಸ್ಥಾಪನೆಯಂತಹ ಪರಿಣಾಮಕಾರಿ ಸೌಲಭ್ಯಗಳ ಪೂರೈಕೆ ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಅವಶ್ಯಕತೆಗನುಗುಣವಾಗಿ ಆದ್ಯತಾನುಸಾರ ಸದರಿ ದಾನಿಗಳ (ಹಳೆ ವಿದ್ಯಾರ್ಥಿಗಳ ಸಂಘದ) ಸಹಕಾರದಿಂದ ಪೂರೈಸಿಕೊಳ್ಳಲು ಅನುವಾಗುವಂತೆ ಕ್ರಿಯಾ ಯೋಜನೆಯನ್ನು ರೂಪಿಸಿಕೊಂಡು ಮೇಲ್ಕಂಡಂತೆ ” ನಮ್ಮ ಶಾಲೆ ನಮ್ಮ ಜವಬ್ದಾರಿ * ಕಾರ್ಯಕ್ರಮದಡಿ ಈ ದಾನಿಗಳು ಕೊಡುಗೆಯಾಗಿ ನೀಡುವ ಸದರಿ ಸೌಲಭ್ಯಗಳನ್ನು ಸರ್ಕಾರದ ಮತ್ತು ಈ ಕಛೇರಿಯ ಉಲ್ಲೇಖಿತ ಪತ್ರಗಳಂತೆ ನಿಯಮಾನುಸಾರ ಸ್ವೀಕರಿಸಿ ಯಶಸ್ವಿ ಅನುಷ್ಠಾನಕ್ಕೆ ಮುಖ್ಯಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ರವರು ಅಗತ್ಯ ಕ್ರಮವಹಿಸಿ ಅನುಪಾಲನೆ ಮಾಡುವುದು.

ಶಾಲಾ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರನ್ನು ಒಳಗೊಂಡ ತಂಡ ಹಾಗೂ ಶಾಲೆಯೊಂದಿಗೆ ಆನ್‌ಲೈನ್‌ನಲ್ಲಿ ಸಂಪರ್ಕಿಸಲು ಸಹಾಯವಾಗುವಂತೆ ವಾಟ್ಸ್ ಆಪ್ ಗ್ರೂಪ್ ರಚನೆ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಾಲಾ ಅಭಿವೃದ್ಧಿಗೆ ಕಾರ್ಯೋನ್ಮುಖರಾಗುವುದು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...