ನವದೆಹಲಿ : ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಕಿ ಪೂಜೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆಗೆ ಯಾವುದೇ ನಿರ್ಬಂಧವಿಲ್ಲ. ಎಂದಿನಂತೆ ಪೂಜೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯಲ್ಲಿ ಹಿಂದೂ ಭಕ್ತರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯದ ಆದೇಶದ ವಿರುದ್ಧ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಹಿಂದೂಗಳ ಪೂಜೆಗೆ ಯಾವುದೇ ನಿರ್ಬಂಧವಿಲ್ಲ ಎಂದು ತೀರ್ಪು ನೀಡಿದೆ.
ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಜ್ಞಾನವಾಪಿ ಮಸೀದಿ ಆವರಣದ ಒಳಗೆ ಮತ್ತು ಹೊರಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಡ್ವೊಕೇಟ್ ಜನರಲ್ ಗೆ ಆದೇಶಿಸಿತ್ತು.