HomeKarnatakaBIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ

ಕಲಬುರ್ಗಿ: 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಲಬುರ್ಗಿ ಜಿಲ್ಲೆಯ ಮರತೂರ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದವರು. ಸೈಟ್ ಮ್ಯೂಟೇಶನ್ ಮಾಡಿಕೊಡಲು 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಶೋಕ್ ಪಡಶಟ್ಟಿ ಲಂಚದ ಹಣ ಪಡೆಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಡಿವೈ ಎಸ್ ಪಿ ಗೀತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular