![](https://kannadadunia.com/wp-content/uploads/2024/01/Adarsha-vidyalaya.jpg)
ಬೆಂಗಳೂರು : 2024-25ನೇ ಸಾಲಿಗೆ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಯ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
2024-25ನೇ ಸಾಲಿಗೆ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ದಾಖಲಾತಿಯ ಪ್ರವೇಶ ಪರೀಕ್ಷೆಯ ಆನ್ಲೈನ್ ಅರ್ಜಿ ಸಲ್ಲಿಕೆ ದಿನಾಂಕ: 17/01/2024 ರಿಂದ 06/02/2024ರವರೆಗೆ ನಿಗದಿಪಡಿಸಲಾಗಿತ್ತು, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲು ಉಲ್ಲೇಖದಂತೆ ಬೇಡಿಕೆಗಳು ಬಂದಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2024-25ನೇ ಸಾಲಿಗೆ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ದಾಖಲಾತಿಯ ಆನ್ಲೈನ್ ಅರ್ಜಿ ಸಲ್ಲಿಕೆ ದಿನಾಂಕವನ್ನು ಈ ಕೆಳಗಿನಂತೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 11.02.2024
ಅರ್ಜಿಗಳ ಪರಿಶೀಲನೆ : 13.02.2024
Withheld ಅರ್ಜಿಗಳ ಪರಿಶೀಲನೆ : 17.02.2024
![](https://kannadadunia.com/wp-content/uploads/2024/02/WhatsApp-Image-2024-02-06-at-10.50.13-PM.jpeg)