alex Certify ನಾಳೆ ವಿಧಾನಸೌಧದ ಮುಂದೆ ಸಿಎಂ ʻಜನಸ್ಪಂದನʼ : ಈ ದಾಖಲೆಗಳನ್ನು ಕೊಂಡೊಯ್ಯಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ವಿಧಾನಸೌಧದ ಮುಂದೆ ಸಿಎಂ ʻಜನಸ್ಪಂದನʼ : ಈ ದಾಖಲೆಗಳನ್ನು ಕೊಂಡೊಯ್ಯಿರಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆಬ್ರವರಿ 08ರ ನಾಳೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಎರಡನೇ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಾಳೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ.

ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ  ಉಚಿತ ಬಸ್‌, ಉಪಹಾರ, ಊಟದ ವ್ಯವಸ್ಥೆ

ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ.

ಈ ರೀತಿ ನೋಂದಣಿ ಮಾಡಿಕೊಳ್ಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಕೆಗೆ ಆನ್‌ಲೈನ್‌ ಮೂಲಕ  ನೋಂದಾಯಿಸಲು 1902 ಡಯಲ್‌ ಮಾಡಿ. ವಿಧಾನಸೌಧ ಮುಂಭಾಗ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಿ.

ಈ ದಾಖಲೆಗಳು ಕಡ್ಡಾಯ

ಜನಸ್ಪಂದನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ.

ಸ್ಥಳ : ವಿಧಾನಸೌಧದ ಮುಂಭಾಗ

ಸಮಯ : ಬೆಳಿಗ್ಗೆ 10.00 ರಿಂದ ಸಂಜೆ 06.00 ರವರೆಗೆ

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...