ಬೆಂಗಳೂರು: ಬೆಂಗಳೂರು ನಗರದ ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆ ಟೆಂಡರ್ ವಿಳಂಬವಾಗಿದ್ದು, ಏಪ್ರಿಲ್ ನಂತರ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ, ಸಾರು ದೊರೆಯುವ ಸಾಧ್ಯತೆ ಇದೆ.
ಕಳೆದ ಆಗಸ್ಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆ ಗುತ್ತಿಗೆ ಅವಧಿ ಮುಕ್ತಾಯಗೊಂಡಿದ್ದು, ಹೊಸ ಟೆಂಡರ್ ಪ್ರಕ್ರಿಯೆ ನಡೆಯದ ಹಿನ್ನೆಲೆಯಲ್ಲಿ ಹಳೆ ಗುತ್ತಿಗೆದಾರರನ್ನು ಮುಂದುವರಿಸಲಾಗಿತ್ತು. ಡಿಸೆಂಬರ್ ನಲ್ಲಿ ಟೆಂಡರ್ ಆಹ್ವಾನಿಸಲು ಸರ್ಕಾರ ಅನುಮೋದನೆ ನೀಡಿದೆ. ಬಿಬಿಎಂಪಿ ಈ ಬಾರಿ ಕೇಂದ್ರೀಕೃತ ಟೆಂಡರ್ ಆಹ್ವಾನಿಸದೆ 8 ವಲಯಗಳಿಗೆ ಪ್ರತ್ಯೇಕ ಟೆಂಡರ್ ಆಹ್ವಾನಿಸುವುದಕ್ಕೆ ನಿರ್ಧರಿಸಿ ನಾಲ್ಕು ಪ್ಯಾಕೇಜ್ ಗಳಲ್ಲಿ ಟೆಂಡರ್ ಆಹ್ವಾನಿಸಲಾಗಿದೆ.
ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಇದಕ್ಕೆ ಕನಿಷ್ಠ ಒಂದು ತಿಂಗಳು ಬೇಕಾಗುತ್ತದೆ. ಇಂದಿರಾ ಕ್ಯಾಂಟೀನ್ ಆಹಾರ ಪೂರೈಕೆ ಗುತ್ತಿಗೆದಾರರಿಗೆ ಈ ಬಾರಿ ಮುದ್ದೆ, ಸಾರು ನೀಡುವುದನ್ನು ಕಡ್ಡಾಯಗೊಳಿಸಿದ್ದು, ಏಪ್ರಿಲ್ ಬೆಳಗ್ಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಆನಂತರ ಲಭ್ಯವಾಗಲಿದೆ ಎನ್ನಲಾಗಿದೆ.