HomeIndiaBREAKING NEWS: ಜವರಾಯನ ಗೆದ್ದು ಬಂದ ಮಗು: ಬೋರ್ ವೆಲ್ ಗೆ ಬಿದ್ದ 2 ವರ್ಷದ...

BREAKING NEWS: ಜವರಾಯನ ಗೆದ್ದು ಬಂದ ಮಗು: ಬೋರ್ ವೆಲ್ ಗೆ ಬಿದ್ದ 2 ವರ್ಷದ ಬಾಲಕನ ರಕ್ಷಣೆ

ಗುಜರಾತ್‌ ನ ಜಾಮ್‌ ನಗರದ ಗೋವಾನಾ ಗ್ರಾಮದಲ್ಲಿ ಮಂಗಳವಾರ ಸಂಜೆ ಬೋರ್‌ ವೆಲ್‌ ಗೆ ಬಿದ್ದ ಎರಡು ವರ್ಷದ ಬಾಲಕನನ್ನು ಬುಧವಾರ ಮುಂಜಾನೆ ರಕ್ಷಿಸಲಾಗಿದೆ.

ಮಂಗಳವಾರ ಸಂಜೆ 6.30ರ ಸುಮಾರಿಗೆ ಮಗು ಬೋರ್‌ವೆಲ್‌ಗೆ ಬಿದ್ದಿತ್ತು. 9 ಗಂಟೆಗಳ ಕಾರ್ಯಾಚರಣೆಯ ನಂತರ ಬೆಳಗಿನಜಾವ 4 ಗಂಟೆಗೆ ರಕ್ಷಿಸಲಾಯಿತು. ಮಗುವನ್ನು ತಕ್ಷಣವೇ ಚಿಕಿತ್ಸೆಗಾಗಿ ಜಾಮ್‌ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ಸೇವಾ ಇಲಾಖೆಯ ಎರಡು ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿಯಲ್ಲಿ, ಗುಜರಾತ್‌ನ ದ್ವಾರಕಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಿದ ಒಂದು ಗಂಟೆಯೊಳಗೆ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಳು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular