ನವದೆಹಲಿ: ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡಿಗಡೆಯಲ್ಲಿ ಅನ್ಯಾಯಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಕೇಂದ್ರ ಸರ್ಕಾರದ ವಿರುದ್ಧ ರಣಕಹಳೆಗೆ ಮುಂದಾಗಿದೆ.
ಕೆಲವೇ ಹೊತ್ತಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಆರಂಭವಾಗಲಿದೆ. ದೆಹಲಿ ಪೊಲೀಸ್ ಬೆಳಿಗ್ಗೆ 10:30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಪ್ರತಿಭಟನೆಗೆ ಅವಕಾಶ ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಕೆ.ಶಿವಕುಮಾರ್, ಸಚಿವರು, ಶಾಸಕರು, ರಾಜ್ಯಸಭಾ ಸದಸ್ಯರು, ಯೂಥ್ ಕಾಂಗ್ರೆಸ್ ಮುಖಂಡರು ಸೇರಿದಂತೆ ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
ಕೇಂದ್ರ ಸರ್ಕಾರದ ತಾರತಮ್ಯ ನೀತಿ ಖಂಡಿಸಿ ‘ನಮ್ಮ ತೆರಿಗೆ ನಮ್ಮ ಹಕ್ಕು’ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆ ಮೂಲಕ ಕೇಂದ್ರದ ಅನ್ಯಾಯದ ವಿರುದ್ಧ ಹೋರಾಡುತ್ತಿರುವ ಕಾಂಗ್ರೆಸ್ ಈ ಮೂಲಕವಾದರೂ ರಾಜ್ಯಕ್ಕೆ ಅನುದಾನ ಪಡೆಯಬೇಕು ಎಂಬ ಉದ್ದೇಶ ಹೊಂದಿದೆ.