
ಬೆಂಗಳೂರು: ಬೆಂಗಳೂರಿನ ಹಲವು ಐಟಿ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.
ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಐಟಿ ದಾಳಿ ನಡೆಸಲಾಗಿದೆ.
ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದ್ದು, ಖಾಸಗಿ ಕಂಪನಿಗಳ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಲಾಗಿದೆ.