ಇಂದೋರ್ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೊಮ್ಮಗನ ವಿವಾಹ ಆರತಕ್ಷತೆ ಇಂದೋರ್ ನಲ್ಲಿ ಮಂಗಳವಾರ ಅದ್ದೂರಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದರು.
ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ವಿವಾಹ ಆರತಕ್ಷತೆ ಕಾರ್ಯಕ್ರಮ ನಿನ್ನೆ ಇಂದೋರ್ ನಲ್ಲಿ ನಡೆದಿದೆ.ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ , ಸಚಿವ ಕೆಜೆ ಜಾರ್ಜ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.