HomeKarnatakaಗಮನಿಸಿ : ನಾಳೆ ಬೆಂಗಳೂರಲ್ಲಿ ರಾಜ್ಯ ಮಟ್ಟದ 'ಜನಸ್ಪಂದನ' ಕಾರ್ಯಕ್ರಮ, ಸಾರ್ವಜನಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಗಮನಿಸಿ : ನಾಳೆ ಬೆಂಗಳೂರಲ್ಲಿ ರಾಜ್ಯ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ, ಸಾರ್ವಜನಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಫೆಬ್ರವರಿ 8 ರಂದು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಭಾಗಿಯಾಗಿ ತಮ್ಮ ಅಹವಾಲು ಸಲ್ಲಿಸುವಂತೆ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಜನಸ್ಪಂದನಕ್ಕೆ ಆಗಮಿಸುವವರಿಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದ ವರೆಗೆ ಹೋಗಲು ಮತ್ತು ಬರಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಕಾಲದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಅಹವಾಲು ಸಲ್ಲಿಕೆಗೆ ಆನ್ಲೈನ್ ಮೂಲಕ ನೋಂದಾಯಿಸಲು 1902 ಡಯಲ್ ಮಾಡಬಹುದಾಗಿದೆ. ವಿಧಾನಸೌಧ ಮುಂಭಾಗ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಜನಸ್ಪಂದನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ‘ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮ’ ನಡೆಸುತ್ತಿದ್ದಾರೆ. ಇದೇ ಗುರುವಾರ ಫೆಬ್ರವರಿ 08ರಂದು ವಿಧಾನಸೌಧದ ಮುಂಭಾಗ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ. ತಮ್ಮ ಕುಂದುಕೊರತೆಗಳಿಗೆ ಶೀಘ್ರ ಪರಿಹಾರ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸಂಪೂರ್ಣ ಲಾಭ ಪಡೆಯಿರಿ. ವೈದ್ಯಕೀಯ, ಕಂದಾಯ, ಪೊಲೀಸ್, ಪಹಣಿ, ಖಾತೆ, ಸರ್ವೆ, ಪೋಡಿ, ಅನ್ಯಾಯ ಹೀಗೆ ಯಾವುದೇ ವಿಚಾರಗಳಿರಲಿ, ತುರ್ತಾಗಿ ಸೂಕ್ತ ಪರಿಹಾರ ಸಿಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular