HomeIndiaBREAKING: ದೇಶದಲ್ಲೇ ಮೊದಲಿಗೆ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಧ್ವನಿ ಮತದಿಂದ ಅಂಗೀಕಾರ

BREAKING: ದೇಶದಲ್ಲೇ ಮೊದಲಿಗೆ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಧ್ವನಿ ಮತದಿಂದ ಅಂಗೀಕಾರ

ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆಯಲ್ಲಿ ಧ್ವನಿ ಮತದಿಂದ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕರಿಸಲಾಗಿದೆ.

ಮಹತ್ವದ ಬೆಳವಣಿಗೆಯಲ್ಲಿ ಉತ್ತರಾಖಂಡ ವಿಧಾನಸಭೆಯು ಐತಿಹಾಸಿಕ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಬುಧವಾರ ಅಂಗೀಕರಿಸಿತು. ಮಂಗಳವಾರ ಉತ್ತರಾಖಂಡ ಸರ್ಕಾರವು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತು. ಸ್ವಾತಂತ್ರ್ಯದ ನಂತರ ಯಾವುದೇ ರಾಜ್ಯದಲ್ಲಿ ಇಂತಹ ಮೊದಲ ಕ್ರಮ ಇದಾಗಿದೆ.

ಎಲ್ಲಾ ನಾಗರಿಕರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಸ್ಥಾಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಸೂದೆಯನ್ನು ಮಂಡಿಸಿದ್ದರು. ಇದಕ್ಕೆ ಧ್ವನಿಮತದ ಅಂಗೀಕಾರ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular