![](https://kannadadunia.com/wp-content/uploads/2020/12/Dinesh-Gundurao.jpg)
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಆರೋಗ್ಯ ಇಲಾಖೆಯಲ್ಲಿ ಶೀಘ್ರವೇ 800 ತಂತ್ರಜ್ಞರು, ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ದಿನೇಶ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಹೆಚ್ಚಾಗಿದ್ದು, ಸಧ್ಯದಲ್ಲಿಯೇ 800 ತಂತ್ರಜ್ಞರು, ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಕೆಪಿಎಂಎ ಕಾಯ್ದೆ ಪ್ರಕಾರ ಖಾಸಗಿ ಆಸ್ಪತ್ರೆಗಳ ಚಿಕಿತ್ಸೆಗಳಿಗೆ ಸರ್ಕಾರ ಇಂತಿಷ್ಟು ದರ ನಿಗದಿಗೊಳಿಸಿದೆ. ಆದರೆ ಬಹುತೇಕ ಆಸ್ಪತ್ರೆಗಳಲ್ಲಿ ಎಲ್ಲರಿಗೂ ಕಾಣುವಂತೆ ಬೋರ್ಡ್ ಹಾಕಿಲ್ಲ. ರೋಗಿಗಳು ಚಿಕಿತ್ಸೆಗಾಗಿ ದಾಖಲಾದ ಸಂದರ್ಭದಲ್ಲಿ ಅವರ ಮೊಬೈಲ್‌ಗೆ ಚಿಕಿತ್ಸಾ ವೆಚ್ಚಕ್ಕೆ ಸಂಬಂಧಿಸಿದ ಮಾಹಿತಿ ಹೋಗುವಂತೆ ಮಾಡಲಾಗುವುದು. ದರದ ಮಾಹಿತಿ ಕುರಿತು ಡಿಎಚ್‌ಒಗಳು ಪರಿಶೀಲಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.