ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಲಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ರಾಜ್ಯ ಸಭಾ ಸ್ಥಾನದಿಂದ ಬಿಜೆಪಿಯ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ಹಾಗೂ ಕಾಂಗ್ರೆಸ್ಸಿನ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ಸಯ್ಯದ್ ನಾಸಿರ್ ಹುಸೇನ್ ಅವರು ನಿವೃತ್ತಿಯಾಗಲಿದ್ದಾರೆ. ಇವರ ನಿವೃತ್ತಿಯಿಂದ ತೆರವಾಗುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ಇಂದು ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದೆ.
ಅಭ್ಯರ್ಥಿಗಳು ಇಂದಿನಿಂದ ತಮ್ಮ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳ ಸಲ್ಲಿಕೆಗೆ ಫೆ.15 ಕಡೆ ದಿನವಾಗಿದ್ದು, ಫೆ.16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಫೆ.20ರವರೆಗೂ ಉಮೇದು ವಾರಿಕೆ ವಾಪಸ್ ಪಡೆಯಲು ಕಾಲಾವಕಾಶ ನೀಡಲಾಗಿದೆ.