![](https://kannadadunia.com/wp-content/uploads/2023/06/madhu-bangarappa-01.jpg)
ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಮೂರು ದಿನ ಹಾಳಿಗೆ ರಾಗಿ ಮಾಲ್ಟ್ ಮಿಕ್ಸ್ ಮಾಡಿ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲಾ ಮಕ್ಕಳಿಗೆ ರಾಗಿಮಾಲ್ಟ್ ವಿತರಣೆಗೆ ಕ್ರಮ ವಹಿಸಲಾಗಿದ್ದು, ಈ ಸಂಬಂಧ ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯಿಂದ ಪರೀಕ್ಷೆ ಮಾಡಿಸಲಾಗಿದ್ದು, ಮಕ್ಕಳಿಗೆ ನೀಡಬಹುದೆಂಬ ವರದಿ ಬಂದಿದೆ. ಹೀಗಾಗಿ, ಶೀಘ್ರದಲ್ಲೇ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರುತ್ತೇವೆ. ಒಮ್ಮೆ ಫೇಲಾದ ನಂತರ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಪಾಸಾಗುವವರಿಗೆ ಮಾರ್ಕ್ಸ್ ಕಾರ್ಡ್ ನೀಡುವಾಗ ಸಪ್ಲಿಮೆಂಟರಿ ಎಂದು ನಮೂದಿಸುವುದಿಲ್ಲ ಎಂದು ಹೇಳಿದ್ದಾರೆ.